ರಾಯಚೂರು:ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ಕೊರೊನಾ ಸೋಂಕು ವಕ್ಕರಿಸಿದೆ. ಈ ಕುರಿತು ಸ್ವತಃ ಬೋಸರಾಜ್ ಪುತ್ರ ರವಿ ವಿಡಿಯೋ ಮಾಡಿ ಮಾಹಿತಿ ನೀಡಿದ್ದಾರೆ.
ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ವಕ್ಕರಿಸಿದ ಕೊರೊನಾ - ರಾಯಚೂರು ಲೇಟೆಸ್ಟ್ ನ್ಯೂಸ್
ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಬೋಸರಾಜ್ ಪುತ್ರನಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಸ್ವತಃ ವಿಡಿಯೋ ಮಾಡಿ ಅವರು ಮಾಹಿತಿ ನೀಡಿದ್ದಾರೆ.
ರವಿ ಬೋಸರಾಜ್
ಎನ್.ಎಸ್. ಬೋಸರಾಜ್ ಪುತ್ರ ಹಾಗೂ ಕಾಂಗ್ರೆಸ್ ಯುವ ಮುಖಂಡರಾದ ರವಿ ಬೋಸರಾಜ್ ಅವರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಮಾಹಿತಿ ನೀಡಿರುವ ಅವರು, ಕೊರೊನಾ ಪರೀಕ್ಷೆಗೆ ಒಳಗಾದಾಗ ಕೊರೊನಾ ಸೋಂಕು ದೃಢಪಟ್ಟಿದ್ದು, ಎ ಸಿಂಪ್ಟಮ್ಯಾಟಿಕ್ ಇರುವುದರಿಂದ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಆದರೆ ನಾನು ಸ್ವತಃ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಆರೋಗ್ಯವಾಗಿದ್ದಾನೆ ಎಂದು ಹೇಳಿಕೊಂಡಿದ್ದಾರೆ.
ಅವರ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Last Updated : Jul 15, 2020, 3:08 PM IST