ರಾಯಚೂರು :ಕೊರೊನಾ 2ನೇ ಅಲೆಯ ಭೀತಿ ಶುರುವಾಗಿದೆ. ಸರ್ಕಾರ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಕೊರೊನಾ ನಿಯಮಗಳನ್ನ ಪಾಲಿಸುವಂತೆ ಆದೇಶಿಸಿದೆ. ಆದ್ರೆ, ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾತ್ರ ಕೊರೊನಾ ನಿಯಮಗಳು ಅನ್ವಯಿಸುವುದಿಲ್ಲವೇ ಅನ್ನೋ ಪ್ರಶ್ನೆ ಇದೀಗ ಉದ್ಭವಿಸಿದೆ.
ಮಸ್ಕಿ ಪಟ್ಟಣದ ಪೊಲೀಸ್ ಠಾಣೆ ಪಕ್ಕದಲ್ಲಿರುವ ಮೈದಾನದಲ್ಲಿ ಮಾ.20ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ, ಸಚಿವರು, ಶಾಸಕರು, ಮುಖಂಡರು ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲು ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು. ಆದ್ರೆ, ಈ ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳು ಮಾತ್ರ ಪಾಲನೆಯಾಗಿಲ್ಲ.