ರಾಯಚೂರು:ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಕೊರೊನಾ ಶಂಕೆ ಹಿನ್ನೆಲೆ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಸಂಚಾರಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ ಶಂಕೆ... ಸಂಚಾರಿ ಠಾಣೆ ಸೀಲ್ ಡೌನ್ - police station
ಠಾಣೆಯ ಹೆಡ್ ಕಾನ್ಸ್ಟೇಬಲ್ ಕೆಲ ದಿನಗಳ ಕಾಲ ರಜೆ ಮೇಲೆ ತೆರಳಿದ್ದರು. ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಬಳಿ ತಪಾಸಣೆಗೆ ತೆರಳಿದಾಗ ಕೊರೊನಾ ಶಂಕೆ ವ್ಯಕ್ತವಾಗಿದೆ.
ಸೀಲ್ ಡೌನ್
ಠಾಣೆಯ ಹೆಡ್ ಕಾನ್ಸ್ಟೇಬಲ್ ಕೆಲ ದಿನಗಳ ಕಾಲ ರಜೆಯ ಮೇಲೆ ತೆರಳಿದ್ದರು. ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರ ಬಳಿ ತಪಾಸಣೆಗೆ ತೆರಳಿದಾಗ ಕೊರೊನಾ ಶಂಕೆ ವ್ಯಕ್ತವಾಗಿದೆ.
ಇದರಿಂದ ಎಚ್ಚೆತ್ತ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಂಚಾರಿ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಮೂಲಕ 48 ಗಂಟೆಗಳ ಕಾಲ ಸೀಲ್ ಡೌನ್ ಮಾಡಿದ್ದಾರೆ. ಹೆಡ್ ಕಾನ್ಸ್ಟೇಬಲ್ ಕ್ವಾರಂಟೈನ್ ಆಗಿದ್ದು, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಮಂದಿ ಕಾನ್ಸ್ಟೇಬಲ್ಸ್ ಕೂಡ ಕ್ವಾರಂಟೈನ್ ಆಗಿದ್ದಾರೆ.