ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ರಾಯಚೂರಿನಲ್ಲಿ ಮೂವರು ಆಸ್ಪತ್ರೆಗೆ ದಾಖಲು

ರಾಯಚೂರಿನಲ್ಲಿ ಇಂದು ಮೂವರು ಕೊರೊನಾ ಶಂಕಿತರನ್ನು ನಗರದ ರಿಮ್ಸ್ ಆಸ್ಪತ್ರೆ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ.

Corona suspected : Three people hospitalized
ಕೊರೊನಾ ಶಂಕೆ: ರಾಯಚೂರಿನಲ್ಲಿ ಮೂವರು ಆಸ್ಪತ್ರೆಗೆ ದಾಖಲು

By

Published : Mar 21, 2020, 8:30 PM IST

ರಾಯಚೂರು: ಜಿಲ್ಲೆಯಲ್ಲಿ ಇಂದು ಮೂವರು ಕೊರೊನಾ ಶಂಕಿತರನ್ನ ನಗರದ ರಿಮ್ಸ್ ಆಸ್ಪತ್ರೆ ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇದರಿಂದ ವಾರ್ಡ್‌ನಲ್ಲಿ ಚಿಕಿತ್ಸೆಗಾಗಿ ನಾಲ್ವರನ್ನು ದಾಖಲಿಸಿದಂತಾಗಿದೆ.

ವಿದೇಶದಿಂದ ಮರಳಿದ 10 ಜನರನ್ನು ಗುರುತಿಸಿ, ಆರೋಗ್ಯ ತಪಾಸಣೆ ನಡೆಸಲಾಗಿದೆ. ವಿದೇಶಕ್ಕೆ ಹೋಗಿ ಬಂದಿರುವ ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದ್ದ 416 ಜನರನ್ನು ಪತ್ತೆ ಹಚ್ಚಿ ಅವರನ್ನು ಮನೆಯಲ್ಲಿಯೇ ಇರಿಸಿ ನಿಗಾ ವಹಿಸಲಾಗಿದೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇದುವರೆಗೂ 6 ಜನರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗಿದ್ದು, ಅದರಲ್ಲಿ ಇಬ್ಬರ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಇನ್ನೂ ನಾಲ್ವರ ವರದಿ ಬರಬೇಕಾಗಿದೆ.


ಇನ್ನು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಸಂದರ್ಭದಲ್ಲಿ ಜನರು ಮನೆಯಿಂದ ಹೊರ ಬರದಂತೆ ಹಾಗೂ ಗುಂಪು ಗುಂಪಾಗಿ ಸೇರಿದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಬಂದೋಬಸ್ತ್‌ಗಾಗಿ 4 ಡಿವೈಎಸ್‌ಪಿ, 13 ಸಿಪಿಐ, 23 ಪಿಎಸ್‌ಐ, 89 ಎಎಸ್‌ಐ, 495 ಪೇದೆಗಳು, 68 ಮಹಿಳಾ ಪೇದೆಗಳು ಸೇರಿದಂತೆ 8 ಡಿಆರ್ ತುಕಡಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details