ಕರ್ನಾಟಕ

karnataka

ETV Bharat / state

ಪೊಲೀಸರಿಗೆ ಕೋವಿಡ್​​ ಕಾಟ: ತಪಾಸಣೆ‌ಗೆ ಮುಗಿಬಿದ್ದ ಖಾಕಿ ಪಡೆ - Corona virus update

ಎಸ್ಪಿ ಕಚೇರಿಯ ಕೆಲ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡ ಪರಿಣಾಮ ಅವರ ಸಂಪರ್ಕಕ್ಕೆ ಬಂದ ಮತ್ತು ಮುಂಜಾಗ್ರತಾ ಕ್ರಮವಾಗಿ ಉಳಿದ ಸಿಬ್ಬಂದಿಯೂ ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ.

Corona test
Corona test

By

Published : Aug 7, 2020, 1:37 PM IST

ರಾಯಚೂರು: ಜಿಲ್ಲಾ ಪೊಲೀಸ್ ಇಲಾಖೆಯ ಹಲವು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಉಳಿದ ಸಿಬ್ಬಂದಿ ಕೊರೊನಾ ಪರೀಕ್ಷೆ ಮಾಡಿಸಲು ಮುಗಿ ಬೀಳುತ್ತಿದ್ದಾರೆ.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. ಎಸ್ಪಿ ಕಚೇರಿಯ ಹೆಡ್‌ ಕಾನ್ಸ್‌ಟೇಬಲ್ಸ್, ಎಎಸ್‌ಐಗಳು ಸೇರಿದಂತೆ ಹಲವರಿಗೆ ಸೋಂಕು ಹರಡಿದೆ. ಹೀಗಾಗಿ ಉಳಿದ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಕೊರೊನಾ ಪರೀಕ್ಷೆಗೆ ಒಳಗಾಗುತ್ತಿದ್ದಾರೆ. ಜೊತೆಗೆ ಜನರೂ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ.

ABOUT THE AUTHOR

...view details