ಕರ್ನಾಟಕ

karnataka

ETV Bharat / state

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಲಸಿಕೆಗೆ ಚಾಲನೆ

ರಾಯಚೂರು ಜಿಲ್ಲೆಯಲ್ಲಿ ಒಟ್ಟು 9 ಸಾವಿರ ಡೋಸ್ ಸಂಗ್ರಹಿಸಲಾಗಿದೆ. ಮೊದಲನೇ ದಿನವಾದ ಇಂದು ರಿಮ್ಸ್ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಗುರುತಿಸಲಾಗಿರುವ 6 ಕಡೆಗಳಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಲಾಗಿದೆ.

ಲಸಿಕೆಗೆ ಚಾಲನೆ
ಲಸಿಕೆಗೆ ಚಾಲನೆ

By

Published : Jan 16, 2021, 4:00 PM IST

ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಮಂಜುನಾಥ ಎಂಬುವರಿಗೆ ಮೊದಲ ಲಸಿಕೆ ಹಾಕುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನ್​ಗೆ ಚಾಲನೆ ನೀಡಲಾಯಿತು.

ಜಿಲ್ಲೆಯಲ್ಲಿ ಒಟ್ಟು 9 ಸಾವಿರ ಡೋಸ್ ಸಂಗ್ರಹಿಸಲಾಗಿದೆ. ಮೊದಲನೇ ದಿನವಾದ ಇಂದು ರಿಮ್ಸ್ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಗುರುತಿಸಲಾಗಿರುವ 6 ಕಡೆಗಳಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಲಾಗಿದೆ.

ರಿಮ್ಸ್ ಆಸ್ಪತ್ರೆಯಲ್ಲಿ 100 ಜನರಿಗೆ ಇಂದು ಲಸಿಕೆಯನ್ನು ಹಾಕಲಾಗುತ್ತಿದೆ. ಬೆಳಗ್ಗೆ 9ರಿಂದ 5 ಗಂಟೆಯವರೆಗೆ ಲಸಿಕೆ ಸಮಯ ನಿಗದಿ ಪಡಿಸಲಾಗಿದೆ. ಕೊರಾನಾ ವಾರಿಯರ್ಸ್ ಸುಮಾರು 15,000ಕ್ಕೂ ಹೆಚ್ಚಿದ್ದು, ಇವರ ಬಳಿಕ ಸರ್ಕಾರದ ಆದೇಶದ ಮೇರೆಗೆ ಇತರರಿಗೆ ಲಸಿಕೆ ಹಾಕಲಾಗುವುದು.

ರಾಯಚೂರು ಜಿಲ್ಲೆಯಲ್ಲಿ ಕೊರೊನಾ ಲಸಿಕೆಗೆ ಚಾಲನೆ

ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್, ಜಿಲ್ಲೆಯಲ್ಲಿ ಇಂದಿನಿಂದ ಕೊರೊನಾ ಲಸಿಕೆಗೆ ಚಾಲನೆ ನೀಡಲಾಗಿದೆ. 6 ಕೇಂದ್ರಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಸರ್ಕಾರದ ನಿರ್ದೇಶಾನುಸಾರ ಲಸಿಕೆ ಹಾಕಲಾಗುತ್ತಿದೆ ಎಂದರು.

ಮೊದಲ ಲಸಿಕೆ ಹಾಕಿಸಿಕೊಂಡ ಮಂಜುನಾಥ ಮಾತನಾಡಿ, ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದೇನೆ, ನನಗೆ ಯಾವುದೇ ತೊಂದರೆಯಾಗಿಲ್ಲ. ಲಸಿಕೆ ಬಂದಿರುವುದು ಖುಷಿಯಾಗಿದೆ. ಎಲ್ಲರೂ ಧೈರ್ಯದಿಂದ ಲಸಿಕೆ ಹಾಕಿಸಿಕೊಳ್ಳಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ABOUT THE AUTHOR

...view details