ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಸೋಂಕಿತರ ಸಂಖ್ಯೆ ಮೂರು ಸಾವಿರ ದಾಟಿದೆ.
ಇಂದು ಒಂದೇ ದಿನ ಜಿಲ್ಲೆಯಲ್ಲಿ 181 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯ ಸೋಂಕಿತರ ಸಂಖ್ಯೆ 3,122ಕ್ಕೆ ತಲುಪಿದೆ. ಪತ್ತೆಯಾದ ಸೋಂಕಿತರಲ್ಲಿ 2,057 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 1,031 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಸೋಂಕಿತರ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ನಗರ ಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, 20 ಹಾಟ್ಸ್ಪಾಟ್ ಗುರುತಿಸಿ, ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.
ಸೋಂಕಿತರ ರೋಗಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್ ಹಾಗೂ ಒಪೆಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗುತ್ತಿದೆ. ಸೋಂಕಿತರ ಸಂಪರ್ಕಗಳ ಮಾಹಿತಿಯನ್ನು ಸಂಗ್ರಹಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.