ಕರ್ನಾಟಕ

karnataka

ETV Bharat / state

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಆಯೋಜಕ ಸೇರಿ ಹಲವರ ವಿರುದ್ಧ ದೂರು - covid news

ಬಿಜೆಪಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ. ಸಂಸದ ಭಗವಂತ ಖೂಬಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊರೊನಾ ನಿಯಮ ಉಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ.

Covid norms violated in bjp's Janarshivad yatre at Raichur
ಜನಾಶೀರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆ

By

Published : Aug 19, 2021, 3:00 PM IST

ರಾಯಚೂರು: ಕೋವಿಡ್ ನಿಯಮ ಉಲ್ಲಂಘಿಸಿ ನಗರದಲ್ಲಿ ನಡೆದ ಬಿಜೆಪಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಆಯೋಜಕರ ಹಾಗೂ ಕಲ್ಯಾಣ ಮಂಟಪ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕಲ್ಯಾಣ ಮಂಟಪ ಹಾಗೂ ಕಾರ್ಯಕ್ರಮದ ಆಯೋಜಕರು ಸೇರಿದಂತೆ ಐದಾರು ಜನರ ಮೇಲೆ ಪ್ರಕರಣ ದಾಖಲಾಗಿದೆ. ನಿನ್ನೆ ರಾಯಚೂರು ನಗರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಜನಾಶೀರ್ವಾದ ಯಾತ್ರೆ ಆಯೋಜಿಸಲಾಗಿತ್ತು.

ವೀರಶೈವ ಕಲ್ಯಾಣ ಮಂಟಪದಲ್ಲಿ ರಾತ್ರಿ 11 ಗಂಟೆಯವರೆಗೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಓದಿ:ಬಿಜೆಪಿ ಜನಾಶೀರ್ವಾದ ಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ: ಆಯೋಜಕರ ವಿರುದ್ಧ ಎಫ್​​ಐಆರ್​​​

ABOUT THE AUTHOR

...view details