ರಾಯಚೂರು: ಎರಡನೇ ಅಲೆ ಕೋವಿಡ್ ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದ್ರೆ ನೈಟ್ ಕರ್ಫ್ಯೂ ಜಾರಿಯಲ್ಲಿರುವಾಗಲೇ ಮಸ್ಕಿ ಪಟ್ಟಣದಲ್ಲಿ ಅನಗತ್ಯವಾಗಿ ಬೈಕ್ಗಳಲ್ಲಿ ಓಡಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಲಾಗಿದೆ. 30ಕ್ಕೂ ಅಧಿಕ ಬೈಕ್ಗಳನ್ನು ಮಸ್ಕಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನೈಟ್ ಕರ್ಫ್ಯೂ ವೇಳೆ ನಿಯಮ ಉಲ್ಲಂಘನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಲಿಂಗಸೂಗೂರು ಡಿವೈಎಸ್ಪಿ ನೇತೃತ್ವದಲ್ಲಿ ಕಳೆದ ರಾತ್ರಿ 30 ಬೈಕ್ಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.
ನಿಯಮಗಳನ್ನು ಗಾಳಿಗೆ ತೂರಿದ ಜನತೆ:
ರಾಯಚೂರು ಜಿಲ್ಲೆಯಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಆದ್ರೆ ನಿಯಮ ಪಾಲಿಸಲು ಜನರು ಹಿಂದೇಟು ಹಾಕುತ್ತಿದ್ದಾರೆ. ನಗರದ ತರಕಾರಿ ಮಾರುಕಟ್ಟೆಯಲ್ಲಿ ಜನರು ಪರಸ್ಪರ ಅಂತರ ಕಾಯ್ದುಕೊಳ್ಳದೆ ಇರುವುದು, ಮಾಸ್ಕ್ ಧರಿಸದೆ ಇರುವ ದೃಶ್ಯಗಳು ಕಂಡು ಬಂದಿವೆ.
ಮಾರುಕಟ್ಟೆಗಳಲ್ಲಿ ನಿಯಮ ಉಲ್ಲಂಘನೆ ನಿಯಮ ಪಾಲಿಸದಿರುವುದನ್ನು ಕಂಡಾಗ ಸ್ಥಳದಲ್ಲಿ ಸಂಬಂಧಿಸಿದ ಅಧಿಕಾರಿಗಳು ನಿಯಮ ಪಾಲಿಸುವಂತೆ ಜನರಿಗೆ ಸೂಚಿಸಿದ್ರು.
ಇದನ್ನೂ ಓದಿ:ಜನರ ಸಾವಿನ ಮನೆಯಲ್ಲಿ ಚೆಲ್ಲಾಟವಾಡಬೇಡಿ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ