ರಾಯಚೂರು: ವೈದ್ಯರೊಬ್ಬರು ಸಂಚರಿಸುತ್ತಿದ್ದ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ರಾಯಚೂರು ತಾಲೂಕಿನ ಸಾಥ್‌ಮೈಲ್ ಕ್ರಾಸ್ ಹತ್ತಿರ ಇಂದು ಮಧ್ಯಾಹ್ನದ ವೇಳೆಗೆ ನಡೆದಿದೆ. ನಗರದ ಬೆಟ್ಟದೂರು ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ವೈದ್ಯರಿಗೆ ಯಾವುದೇ ಹಾನಿಯಾಗಿಲ್ಲ.
ರಾಯಚೂರು ಬಳಿ ವೈದ್ಯನ ಕಾರಿನ ಮೇಲೆ ಗುಂಡಿನ ದಾಳಿ! - raichuru crime
ರಾಯಚೂರು ಬಳಿ ವೈದ್ಯರೊಬ್ಬರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ.
Published : Aug 31, 2023, 5:08 PM IST
|Updated : Aug 31, 2023, 6:00 PM IST
ಘಟನೆಯ ಕುರಿತು ವಿಷಯ ತಿಳಿದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮತ್ತು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಘಟನೆಯಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ದಾಳಿ ಮಾಡಿದವರು ಯಾರು ಮತ್ತು ಕೃತ್ಯದ ಹಿಂದಿನ ಕಾರಣವನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಯುವ ವಿಜ್ಞಾನಿಯ ಕಾರಿನ ಗಾಜು ಒಡೆದು ಹಲ್ಲೆಗೆ ಯತ್ನಿಸಿದ ಕಿಡಿಗೇಡಿಗಳು