ಕರ್ನಾಟಕ

karnataka

By

Published : Apr 8, 2020, 6:14 PM IST

ETV Bharat / state

ಮಳೆಯಿಂದ ಹಾನಿಗೊಳಗಾಗಿರುವ ಬೆಳೆ ಸಮೀಕ್ಷೆ : ಕೃಷಿ ಸಚಿವರ ಭರವಸೆ

ಕಳೆದ ಎರಡು ದಿನಗಳಿಂದ ಮಳೆ ಸುರಿದ ಪರಿಣಾಮ ಭತ್ತ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

Agriculture Minister B.C.Patil
ಮಳೆಯಿಂದಾಗಿ ಹಾನಿಯಾಗಿರುವ ಬೆಳೆ ಸಮೀಕ್ಷೆ ನಡೆಸಲಾಗುವುದು: ಸಚಿವ ಬಿ.ಸಿ.ಪಾಟೀಲ್

ರಾಯಚೂರು: ಮಳೆಯಿಂದಾಗಿ ಹಾನಿಯಾಗಿರುವ ಬೆಳೆಯನ್ನ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ರಾಯಚೂರಿನ ಕೃಷಿ ವಿವಿ ಪ್ರೇಕ್ಷಾಗೃಹ ಸಭಾಂಗಣದಲ್ಲಿ ಕೋವಿಡ್ 19, ಲಾಕ್​​​ಡೌನ್ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳ ಹಾಗೂ ರೈತರ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಮಳೆ ಸುರಿದ ಪರಿಣಾಮ ಭತ್ತ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು. ಲಾಕ್​ಡೌ​ನ್​ನಿಂದ ಕೃಷಿ ಉತ್ಪನ್ನಗಳಿಗೆ ಸರಕು, ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ. ಈ ಬಗ್ಗೆ ಸಂಬಂಧಿಸಿದ ಇಲಾಖೆ ನಿರ್ದೇಶನ ನೀಡಲಾಗಿದೆ. ಜನರಿಗೆ ಅವಶ್ಯವಿರುವ ಪೆಟ್ರೋಲ್ ಹಾಗೂ ಡಿಸೇಲ್​ಗೆ ಯಾವುದೇ ತೊಂದರೆ ಮಾಡಬಾರದು. ಕೃಷಿ ಚಟುವಟಿಕೆಗೆ ಸಹ ರೈತರಿಗೆ ಯಾವುದೇ ನಿರ್ಬಂಧವಿಲ್ಲ. ಅಲ್ಲದೇ ಹೊರ ರಾಜ್ಯದಿಂದ ಬರುವ ಬೆಳೆಗಳಿಗೆ, ಕೃಷಿ ಯಂತ್ರೋಪಕರಣಗಳಿಗೆ ಯಾವುದೇ ನಿರ್ಬಂಧ ಹೇರಬಾರದು. ರೈತರಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಗಮನಹರಿಸಿ ಹಾಪ್ ಕಾಮ್ಸ್ ಗಳನ್ನ ತೆರೆದು ರೈತರಿಂದ ಬೆಳೆಗಳನ್ನು ಕೊಂಡು ಕೊಳ್ಳಬೇಕು ಎಂದರು.

ಇನ್ನು ಕೇಂದ್ರ ಸರಕಾರದಿಂದ ಅಗತ್ಯ ಅನುದಾನ ಬಂದಿದೆ ತೊಂದರೆಯಿಲ್ಲ. ಬರಗಾಲಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಎಲ್ಲ ತಾಲೂಕುಗಳನ್ನ ಬರಗಾಲ ಪೀಡಿತ ಎಂದು ಘೋಷಣೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುವುದು ಎಂದರು. ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದರ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ABOUT THE AUTHOR

...view details