ರಾಯಚೂರು: ರಾಜ್ಯದಲ್ಲಿ ನೆರೆ ಹಾಗೂ ಬರ ವಿಚಾರದಲ್ಲಿ ರಾಜಕೀಯ ಕಿತ್ತಾಟ ಬೇಡ ಎಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ ಹೇಳಿದ್ದಾರೆ.
ನೆರ ಪರಿಹಾರಕ್ಕೆ ಪಕ್ಷಾತೀತವಾಗಿ ದುಡಿಯಬೇಕು: ಉಜ್ಜಯಿನಿ ಶ್ರೀ - Dasara Mahotsava
ರಾಜ್ಯದ 25 ಸಂಸದರು ಪ್ರಾಮಾಣಿಕವಾಗಿ ನೆರೆ ಪರಿಹಾರಕ್ಕೆ ಪ್ರಧಾನಿಯವರ ಮೇಲೆ ಒತ್ತಡ ಹೇರಬೇಕು. ಈಗಾಗಲೇ ಮಠಾಧೀಶರು ಸಾಕಷ್ಟು ರೀತಿಯಲ್ಲಿ ಪ್ರಧಾನಿಯವರಿಗೆ ಮನವಿ ಮಾಡಿದ್ದೇವೆ ಎಂದ ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ.
ನಗರದ ಶರನ್ನವರಾತ್ರಿ ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಭೇದ ಮರೆತು ನೆರೆ ಸಂತ್ರಸ್ತರಿಗೆ ನೆರವಾಗಬೇಕು. ಪ್ರಸಕ್ತ ವರ್ಷ ನೆರೆ-ಬರ ಎರಡು ನಾಡಿನ ಜನರಿಗೆ ಕಾಡುತ್ತಿದ್ದು, ಹಲವು ಜನ ಜನ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿರ್ಲಕ್ಷ್ಯ ಭಾವನೆ ತಾಳದೆ ಪರಿಹಾರ ನೀಡಬೇಕು. ರಾಜಕೀಯ ಪಕ್ಷಗಳು ಪಕ್ಷಾತೀತವಾಗಿ ಪರಿಹಾರ ಕಾರ್ಯದಲ್ಲಿ ಮಗ್ನರಾಗಿರಬೇಕಾಗಿದ್ದು, ಒಟ್ಟಾರೆ ಜನರ ಕಲ್ಯಾಣವಾಗಲಿ ಎನ್ನುವ ಉದ್ದೇಶ ನಮ್ಮದು ಎಂದು ಹೇಳಿದರು.
ನೆರೆ ಪರಿಹಾರ ನಿಜಕ್ಕೂ ಅತ್ಯಂತ ಮಂದಗತಿಯಲ್ಲಿ ನಡೆಯುತ್ತಿರುವುದು ವಿಷಾದನೀಯವಾಗಿದೆ. ಜನರ ಸಮಸ್ಯೆ ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಆಡಳಿತದಲ್ಲಿರುವುದರಿಂದ ಹೆಚ್ಚಿನ ನಿರೀಕ್ಷೆ ಇರುತ್ತದೆ. ಈ ನಿರೀಕ್ಷೆ ಭಂಗವಾಗದ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ತಿಳಿಸಿದರು.