ಕರ್ನಾಟಕ

karnataka

ETV Bharat / state

ಮಸ್ಕಿ ಚುನಾವಣೆ; ಮೊದಲ ದಿನ ಯಾವುದೇ ನಾಮಪತ್ರ  ಸಲ್ಲಿಕೆ ಇಲ್ಲ - District Collector R. Venkatesh Kumar

ನಾಮಪತ್ರ ಸಲ್ಲಿಕೆ ವೇಳೆ ಕಡ್ಡಾಯವಾಗಿ ಕೊರೊನಾ ನಿಯಮಾವಳಿ ಪಾಲಿಸಬೇಕು. ಜೊತೆಗೆ ರ್ಯಾಲಿ ನಡೆಸಲು ಚುನಾವಣಾ ಅಧಿಕಾರಿಗಳಿಂದ ಮೊದಲೇ ಅನುಮತಿ ಪಡೆದುಕೊಳ್ಳಬೇಕು ಎಂದು ರಾಯಚೂರು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

Masky Assembly Election
ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್

By

Published : Mar 24, 2021, 1:09 PM IST

ರಾಯಚೂರು: ಜಿಲ್ಲೆಯ ಮಸ್ಕಿ ಕ್ಷೇತ್ರದ ವಿಧಾನಸಭಾ ಚುನಾವಣೆಗೆ ನಿನ್ನೆಯಿಂದ (ಮಂಗಳವಾರ) ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನದಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲವೆಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಸೇರಿದಂತೆ ಕಡ್ಡಾಯವಾಗಿ ಕೊರೊನಾ ನಿಯಮಾವಳಿ ಪಾಲಿಸಬೇಕು. ಅಲ್ಲದೇ, ರ್ಯಾಲಿ ನಡೆಸಲು ಚುನಾವಣಾ ಅಧಿಕಾರಿಗಳಿಂದ ಮೊದಲೇ ಅನುಮತಿ ಪಡೆದುಕೊಳ್ಳಬೇಕು. ರ್ಯಾಲಿಯಲ್ಲಿ 100ಕ್ಕಿಂತ ಹೆಚ್ಚು ಜನರಿರಬಾರದು.

ನಾಮಪತ್ರ ಸಲ್ಲಿಕೆ ವೇಳೆ ಆರ್​ಒ ಕಚೇರಿಯೊಳಗೆ ಅಭ್ಯರ್ಥಿ ಸೇರಿ ಐವರಿಗೆ ಮಾತ್ರ ಅವಕಾಶವಿದೆ. ಕಾರ್ಯಕರ್ತರು, ಅಭಿಮಾನಿಗಳು 100 ಮೀಟರ್ ಅಂತರದಲ್ಲಿಯೇ ಇರಬೇಕು. ನಿಯಮ ಪಾಲಿಸದಿದ್ದರೆ, ಸೂಕ್ತಕ್ರಮ ಕೈಗೊಳ್ಳಲಾಗುವುದು ಎಚ್ಚರಿಕೆ ನೀಡಿದ್ದಾರೆ.

ಓದಿ:ಕಲಾಪದಲ್ಲಿ ಪಟ್ಟುಬಿಡದ ವಿಪಕ್ಷ: ತಜ್ಞರ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್​​ ಹಣಿದ ಸಿಎಂ - VIDEO

ABOUT THE AUTHOR

...view details