ರಾಯಚೂರು :ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಯೇ ಮೂರುಗಂಟೆ ತಡವಾಗಿ ಆಗಮಿಸಿದ್ದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಯಿತು.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಯರಗುಂಟಿ ಗ್ರಾಮದಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಆರಂಭವಾಗಬೇಕಿತ್ತು. ಆದರೆ, ಅಧಿಕಾರಿಗಳು ಮೂರು ಗಂಟೆ ತಡವಾಗಿ ಆಗಮಿಸಿದ್ದರಿಂದ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಹೇಳಿಕೊಳ್ಳಬೇಕು ಎಂದು ಬಂದಿದ್ದ ಜನ ಮನೆಗೆ ತೆರಳಿದ್ದಾರೆ.