ರಾಯಚೂರು : ಜಿಲ್ಲೆಯಲ್ಲಿ ಗಾಳಿ, ಮಳೆಯಿಂದ ಹಾನಿಗೀಡಾದ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಡಿಸಿಎಂ ಭೇಟಿ: ರೈತರ ಜೊತೆ ಸಮಾಲೋಚನೆ - latest Dcm lakshman savadi news
ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ, ಗಾಳಿಯಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಹಾನಿಯಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಡಿಸಿಎಂ ಭೇಟಿ
ಜಿಲ್ಲೆಯ ಸಿರವಾರ ಪ್ರದೇಶ ವ್ಯಾಪ್ತಿಯಲ್ಲಿ ಹಾನಿಗೀಡಾದ ಮಾರ್ಕಂಡ್ಯ, ಆದಪ್ಪ ಎನ್ನುವ ರೈತರ ಭತ್ತದ ಗದ್ದೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರೊಂದಿಗೆ ಸಮಾಲೋಚನೆ ನಡೆಸಿದರು. ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು, ಮಳೆ, ಗಾಳಿಯಿಂದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತದ ಬೆಳೆ ಹಾನಿಯಾಗಿ ರೈತರು ನಷ್ಟ ಅನುಭವಿಸುತ್ತಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಡಿಸಿಎಂ ಭೇಟಿ
ಹಾನಿಯಾದ ಪ್ರದೇಶಕ್ಕೆ ಉಪಮುಖ್ಯಮಂತ್ರಿ ಭೇಟಿಯಾಗಿ ರೈತರ ಜೊತೆ ಸಮಾಲೋಚನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಶಾಸಕರು, ಸಂಸದರು ಸಾಥ್ ನೀಡಿದ್ರು.