ಕರ್ನಾಟಕ

karnataka

ETV Bharat / state

ನೆರೆಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಡಿಸಿಎಂ ಕಾರಜೋಳ ಆದೇಶ

ರಾಯಚೂರು ಜಿಲ್ಲೆಯಲ್ಲಿನ ನೆರೆ ಹಾವಳಿಗೆ ತುತ್ತಾದ ರಸ್ತೆ, ಸೇತುವೆ ಹಾಗೂ ಡ್ಯಾಂಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಇಲ್ಲವಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ರು.

ಪ್ರಗತಿ ಪರಿಶೀಲನಾ ಸಭೆ

By

Published : Sep 17, 2019, 3:54 PM IST

ರಾಯಚೂರು: ನೆರೆಹಾವಳಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ಹಾಗೂ ಡ್ಯಾಂಗಳ ಕಾಮಗಾರಿ ಪೂರ್ಣಗೊಳಿಸುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಡಿಸಿಎಂ ಗೋವಿಂದ್ ಕಾರಜೋಳ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಪ್ರಗತಿ ಪರಿಶೀಲನಾ ಸಭೆ

ಇಂದು ಜಿಲ್ಲಾ ಪಂಚಾಯಯತ್​ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತ್ವರಿತಗತಿಯಲ್ಲಿ ದುರಸ್ತಿ ಕಾಮಗಾರಿ ಪೂರ್ಣಗೊಳಿಸಬೇಕು. ವಿಳಂಬವಾಗದಂತೆ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತನ್ನಿ ಎಂದರು.

ಇದಕ್ಕೂ ಮೊದಲು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ದೇವದುರ್ಗ ಶಾಸಕ ಕೆ. ಶಿವನಗೌಡ ಅವರು ನೆರೆ ಹಾವಳಿಯ ಕುರಿತು ಮಾಹಿತಿ ನೀಡಿದರು.

ಸಸ್ಪೆಂಡ್ ಮಾಡ್ತೀನಿ: ನಗರದ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆ ಕಾಮಗಾರಿ ಅವಧಿ ಮುಗಿಯುತ್ತಾ ಬಂದರೂ ಪೂರ್ಣವಾಗಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಅಧಿಕಾರಿಗಳನ್ನು ಅಮಾನತುಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ABOUT THE AUTHOR

...view details