ರಾಯಚೂರು: ಮಾನವಿ ತಾಲೂಕಿನ ಹರನಹಳ್ಳಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ನದಿಗೆ ಬಿದ್ದ ಶಾಸ್ತ್ರೀ ಕ್ಯಾಂಪ್ನ ನಿವಾಸಿ ಸಂದೀಪ್ ಕುಮಾರ (27) ಶವವಾಗಿ ಪತ್ತೆಯಾಗಿದ್ದಾನೆ.
ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದ ಯುವಕ ಈ ಯುವಕ ರಾಮಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿ ಫೋಟೊ ತೆಗೆದುಕೊಳ್ಳಲು ಗೆಳೆಯರೊಂದಿಗೆ ನದಿ ತೀರಕ್ಕೆ ತೆರಳಿದ್ದಾನೆ. ಈ ವೇಳೆ ಕಾಲು ಜಾರಿ ನದಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ.
ಸುದ್ದಿ ತಿಳಿದು ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡ ಯುವಕನ ಶೋಧ ಕಾರ್ಯ ನಡೆಸಿದೆ. ನಂತರ ಆತನ ಶವ ಪತ್ತೆಯಾಗಿದೆ. ನದಿಗೆ ಬಿದ್ದ ವೇಳೆ ಯುವಕನ ತಲೆಗೆ ಪೆಟ್ಟು ಬಿದ್ದಿದೆ.
ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಶ್ರೀನಿವಾಸ್ ಶಾಸ್ತ್ರಿ ಕ್ಯಾಂಪ್ಗೆ ಭೇಟಿ ನೀಡಿ, ಮೃತ ಸಂದೀಪ್ ಕುಟುಂಬಕ್ಕೆ ಸಾಂತ್ವನ ಹೇಳಿದರು. ಇದೇ ವೇಳೆ ವಿಪತ್ತು ಪರಿಹಾರ ನಿಧಿಯಿಂದ ಮೃತನ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಲು ತಹಶೀಲ್ದಾರ್ ಅವರಿಗೆ ಸೂಚನೆ ಕೊಟ್ಟರು.
ಈ ಕುರಿತು ಸ್ಥಳೀಯ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.