ರಾಯಚೂರು: ಮುಂಗಾರು ಬಿತ್ತನೆಗಾಗಿ ರೈತರಿಗೆ ಬೀಜದ ಕೊರತೆ ಎದುರಾಗದಂತೆ ಕ್ರಮಕೈಗೊಳುವಂತೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚನೆ ನೀಡಿದ್ರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗಿದೆ. ರೈತರು ಬಿತ್ತನೆ ಕಾರ್ಯ ನಡೆಸಿದ್ದಾರೆ. ಅವರಿಗೆ ಯಾವುದೇ ರೀತಿ ಬೀಜದ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಬೀಜದ ಸಮಸ್ಯೆ ಕಂಡು ಬಂದ್ರೆ ಅಧಿಕಾರಿಗಳನ್ನು ಹೊಣೆ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಕೊರೊನಾ ಸೋಂಕು ಪ್ರಾರಂಭದ ದಿನಗಳಲ್ಲಿ ರಾಯಚೂರು ಹಸಿರು ವಲಯದಲ್ಲಿತ್ತು. ಆದರೆ, ಇದೀಗ 431 ಸೋಂಕಿತರು ಜಿಲ್ಲೆಯಲ್ಲಿದ್ದಾರೆ. ಹೀಗಾಗಿ ಬರುವ ದಿನಗಳಲ್ಲಿ ಸಮುದಾಯಕ್ಕೆ ಸೋಂಕು ಹರಡದಂತೆ ಯೋಜನೆ ರೂಪಿಸಿ, ಕೊರೊನಾ ತಡೆಗೆ ಕೆಲಸ ಮಾಡಬೇಕಾಗಿದೆ ಎಂದರು.