ರಾಯಚೂರು:ಯುಪಿಯ ಹಥ್ರಾಸ್ ನಲ್ಲಿ ಯುವತಿ ಮೇಲಿನ ಅತ್ಯಾಚಾರ ಹಾಗೂ ಕಾಂಗ್ರೆಸ್ ಯುವ ನೇತಾರ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಮೃತ ಯುವತಿಯ ಮನೆಗೆ ತೆರಳಲು ಅವಕಾಶ ನೀಡದೆ ಎಳೆದಾಡಿರುವುದನ್ನು ಖಂಡಿಸಿ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ದೇವದುರ್ಗ ಪಟ್ಟಣದ ಉಪ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿದ ಪದಾಧಿಕಾರಿಗಳು,
ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ಯುವತಿಯ ಮೇಲೆ ನಡೆದ ಅತ್ಯಾಚಾರ ಕೃತ್ಯ ಅಮಾನವೀಯವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.