ರಾಯಚೂರು:ಕೃಷ್ಣಾ ಹಾಗೂ ಭೀಮಾ ನದಿಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜಿಲ್ಲಾಡಳಿತದಿಂದ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಹೇಳಿದರು.
ಶಕ್ತಿ ನಗರದ ಪ್ರವಾಸಿ ಮಂದಿರದಲ್ಲಿ ಎನ್.ಡಿ.ಆರ್.ಎಫ್ ತಂಡದೊಂದಿಗೆ ಸಭೆಯ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಸುರಿದ ಮಳೆಯಿಂದ ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸೊನ್ನಾ ಬ್ಯಾರೆಜ್ನಿಂದ ನಿಗದಿತ 8 ಲಕ್ಷ ಕ್ಯೂಸ್ಸೆಕ್ಸ್ ನೀರು ನದಿಗೆ ಬಿಟ್ಟ ಪರಿಣಾಮ ನೆರೆಯ ಜಿಲ್ಲೆಗಳಾದ ಕಲಬುರಗಿ, ಯಾದಗಿರಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಅಪಾರ ಪ್ರಮಾಣದ ನೀರು ಇಂದು ಮಧ್ಯರಾತ್ರಿ ಇಲ್ಲವೆ ಬೆಳಗ್ಗೆ ತಾಲೂಕಿನ ಗುರುರ್ಜಾಪುರ ಹತ್ತಿರದ ಕೃಷ್ಣಾ ಭೀಮಾ ಸಂಗಮ ಪ್ರದೇಶ ಸೇರುವುದರಿಂದ ತಾಲೂಕಿನ ಕೆಲ ಗ್ರಾಮಗಳಿಗೆ ಪ್ರವಾಹ ಪರಿಸ್ಥಿತಿ ಎದರಾಗಲಿದ್ದು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದರು.