ಕರ್ನಾಟಕ

karnataka

ETV Bharat / state

ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಕಚ್ಚಾ ತೈಲದ ಬೆಲೆ ಇಳಿದಿದ್ರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆಯನ್ನ ದಿನದಿಂದ ದಿನಕ್ಕೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಹೇರುತ್ತಿದೆ..

District congress committee members protest against rising crude oil prices
ಕಚ್ಚಾ ತೈಲ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಪ್ರತಿಭಟನೆ

By

Published : Jun 29, 2020, 2:38 PM IST

ರಾಯಚೂರು :ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಪ್ರತಿಭಟಿಸಿದರು.

ನಗರದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿ ಕಚ್ಚಾ ತೈಲದ ಬೆಲೆ ಇಳಿಮುಖವಾಗಿದ್ರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್, ಡೀಸೆಲ್ ಬೆಲೆಯನ್ನ ದಿನದಿಂದ ದಿನಕ್ಕೆ ಏರಿಕೆ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಹೊರೆ ಹೇರುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಅಷ್ಟೇಅಲ್ಲ, ಇಂತಹ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ಅಗತ್ಯ ವಸ್ತುಗಳು ಅಗ್ಗವಾಗಬೇಕು. ಆದರೆ, ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ಎನ್ ಎಸ್ ಬೋಸರಾಜ್, ಜಿಲ್ಲಾಧ್ಯಕ್ಷ ಬಿ ವಿ ನಾಯಕ, ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ವಸಂತಕುಮಾರ್, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ಆಲಂಪಾಷಾ ಸೇರಿ ಮತ್ತಿತರರಿದ್ದರು.

ABOUT THE AUTHOR

...view details