ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ರಾಯಚೂರಲ್ಲಿ 1,207 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - Raichur Corona Details

ರಾಯಚೂರು ಜಿಲ್ಲೆಯಲ್ಲಿ 1,207 ಮಂದಿಯ ಗಂಟಲು ದ್ರವದ ಮಾದರಿಯನ್ನು ನಿನ್ನೆ ಪ್ರಯೋಗಾಲಯಕ್ಕೆ ಕೊರೊನಾ ಪರೀಕ್ಷೆಗೆಂದು ರವಾನಿಸಲಾಗಿದ್ದು, ಜಿಲ್ಲೆಯಿಂದ ಈವರೆಗೆ ಒಟ್ಟು 12,536 ಜನರ ಗಂಟಲು ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ.

District Corona Details in Raichur District press note
ರಾಯಚೂರಿನ ಜಿಲ್ಲಾಡಳಿತ ಪ್ರಕಟಣೆಯಲ್ಲಿ ಜಿಲ್ಲೆಯ ಕೊರೊನಾ ಡೀಟೈಲ್ಸ್​

By

Published : May 27, 2020, 10:15 AM IST

ರಾಯಚೂರು:ಕೊರೊನಾ ಶಂಕೆ ಹಿನ್ನೆಲೆ ಜಿಲ್ಲೆಯ 1,207 ಮಂದಿಯ ಗಂಟಲು ದ್ರವದ ಮಾದರಿಯನ್ನು ನಿನ್ನೆ ಪ್ರಯೋಗಾಲಯಕ್ಕೆ ಪರೀಕ್ಷೆಗೆಂದು ರವಾನಿಸಲಾಗಿದೆ‌.

ಜಿಲ್ಲೆಯಲ್ಲಿ ಈವರೆಗೆ 12,536 ಜನರ ಗಂಟಲು ದ್ರವದ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದರಲ್ಲಿ 7,868 ವರದಿಗಳು ನೆಗೆಟಿವ್ ಬಂದಿವೆ. ರೋಗ ಲಕ್ಷಣಗಳಿಲ್ಲದ ಕಾರಣ 6 ವರದಿಗಳು ತಿರಸ್ಕೃತಗೊಂಡಿವೆ. ಇನ್ನುಳಿದ 4,596 ಸ್ಯಾಂಪಲ್‍ಗಳ ಫಲಿತಾಂಶ ಬರಬೇಕಿದೆ. ಜಿಲ್ಲೆಯ ಫೀವರ್ ಕ್ಲಿನಿಕ್‍ಗಳಲ್ಲಿ ನಿನ್ನೆ 615 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ.

ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 5,107, ಸಿಂಧನೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 489, ಮಾನವಿ ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 1,589, ದೇವದುರ್ಗ ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 1,871 ಹಾಗೂ ಲಿಂಗಸೂಗುರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ 1,024 ಜನರು ಸೇರಿದಂತೆ 10,080 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ಲ್ಲಿರಿಸಲಾಗಿದೆ. ಈವರೆಗೂ 1061 ಜನರನ್ನು ಬಿಡುಗಡೆ ಮಾಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 66 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ABOUT THE AUTHOR

...view details