ಕರ್ನಾಟಕ

karnataka

ETV Bharat / state

ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ - ಸಂಬಂಧಿಗಳು ಆಕ್ರೋಶ

ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯದ ಕಾರಣ ವೃದ್ಧನೋರ್ವ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇವರ ಸಾವಿಗೆ ಕಾರಣವೆಂದು ಸಂಬಂಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೃದ್ಧ ಬಲಿ

By

Published : Nov 6, 2019, 10:16 AM IST

ರಾಯಚೂರು: ಸಿರವಾರ ತಾಲೂಕಿನ ಕವಿತಾಳ ಸಮುದಾಯ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿವೃದ್ಧನಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಸಾನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.

ಕವಿತಾಳ ಗ್ರಾಮದ ರಂಗಪ್ಪ(70) ಮೃತ ವೃದ್ಧ ಎಂದು ಗುರುತಿಸಲಾಗಿದೆ. ಉಸಿರಾಟದ ತೊಂದರೆಯಿಂದಾಗಿ ರಂಗಪ್ಪನ್ನಿಗೆ ಕವಿತಾಳ ಸಮುದಾಯ ಆಸ್ಪತ್ರೆಗೆ ಚಿಕಿತ್ಸೆ ಕರೆತರಲಾಗಿತ್ತು. ಆದರೆ ರಾತ್ರಿ 8ಗಂಟೆಯಿಂದ 12 ಗಂಟೆಯ ಮಧ್ಯೆ ಒಬ್ಬ ವೈದ್ಯ ಕೂಡ ಆಸ್ಪತ್ರೆಗೆ ಬಂದಿಲ್ಲವವಂತೆ. ಇದರಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯಾದ ಕಾರಣ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಮಯಕ್ಕೆ ಸರಿಯಾಗಿ ಸಿಗದ ಚಿಕಿತ್ಸೆ: ವೃದ್ಧ ಸಾವು

ನಮ್ಮೂರು ಆಸ್ಪತ್ರೆ ಅಂತ ಹೇಳುವ ವೈದ್ಯರು, ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಬೇಜವಾಬ್ದಾರಿ ವರ್ತನೆ ತೋರಿದರೆ ಹೇಗೆ? ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಬಂದಾಗ ವೈದ್ಯರು ಇರಲಿಲ್ಲವೆಂದರೆ ಹೇಗೆ ಎಂದು ವೃದ್ಧನ ಸಂಬಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details