ಕರ್ನಾಟಕ

karnataka

ETV Bharat / state

ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಂದ ಹಣ ವಸೂಲಿ ಆರೋಪ: ಸಿಬ್ಬಂದಿಗೆ ಶಿಕ್ಷೆ - Veeranna

ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮುದಾಯದ‌ ಆರೋಗ್ಯ ಕೇಂದ್ರ ಸಿಬ್ಬಂದಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಸದ್ಯ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಅದೇಶ ಹೊರಡಿಸಿದ್ದಾರೆ.

ಸಮುದಾಯದ‌ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಂದ ಹಣ ವಸೂಲಿ : ಕರ್ತವ್ಯದಿಂದ ಬಿಡುಗಡೆ ಆದೇಶ

By

Published : Sep 15, 2019, 2:50 PM IST

ರಾಯಚೂರು:ರೋಗಿಗಳಿಂದ ಹಣ ವಸೂಲಿ ಮಾಡುತ್ತಿದ್ದ ಸಮುದಾಯ ಆರೋಗ್ಯ ಕೇಂದ್ರದ ಇಬ್ಬರು ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ಸಮುದಾಯದ‌ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಂದ ಹಣ ವಸೂಲಿ ಆರೋಪ : ಕರ್ತವ್ಯದಿಂದ ಬಿಡುಗಡೆ ಆದೇಶ

ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮುದಾಯದ‌ ಆರೋಗ್ಯ ಕೇಂದ್ರದ ಸಿಬ್ಬಂದಿ ಇಂಜೆಕ್ಷನ್‌ಗೆ 20 ರೂಪಾಯಿ ಹಾಗೂ ಗ್ಲೊಕೋಸ್​ಗೆ 50 ರೂಪಾಯಿ ವಸೂಲಿ ಮಾಡುತ್ತಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು.

ಸಮುದಾಯ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹಣ ವಸೂಲಿ ಆರೋಪ

ಮಾಧ್ಯಮದಲ್ಲಿ ವಿಷಯ ಬಿತ್ತರಾದ ಬಳಿಕ ಎಚ್ಚೆತ್ತ ಸಮುದಾಯ ಕೇಂದ್ರದ ಆಡಳಿತ ಅಧಿಕಾರಿ ಇದೀಗ ಶುಶ್ರೂಷಕರಾಗಿದ್ದ ವೀರಣ್ಣ ಹಾಗೂ ವಿಶಾಲಾಕ್ಷಿ ಅವರನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿಯಮಗಳ ಆಧಾರದ ಮೇಲೆ ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details