ರಾಯಚೂರು:ಜಿಲ್ಲೆಗೆ ನೂತನ ಡಿಸಿಯ ಆಗಮನವಾಗಿದೆ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸತೀಶ್ ಬಿ.ಸಿ ಅವರನ್ನು ನಿಯೋಜಿಸಲಾಗಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಆರ್.ವೆಂಕಟೇಶ್ ಕುಮಾರ್ ಅವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ. ಈಗ ಜಿಲ್ಲಾಧಿಕಾರಿಯಾಗಿ ನಿಯುಕ್ತಿ ಮಾಡಿರುವ ಡಾ.ಸತೀಶ್ ಅವರು ತಕ್ಷಣದಿಂದಲೇ ಅಧಿಕಾರ ಸ್ವೀಕರಿಸುವಂತೆ ಸೂಚಿಸಲಾಗಿದೆ.