ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕೋಟಿಯಷ್ಟು ಹಣ ಖರ್ಚು ಮಾಡಿದರೂ ನೀರು ಪೂರೈಕೆಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ಕುಡಿಯುವ ನೀರಿಗೆ ಕೋಟಿ ಕೋಟಿ ಸುರಿದರೂ ಗೆಜ್ಜಲಗಟ್ಟಾ ಗ್ರಾಮದಲ್ಲಿ ಜೀವಜಲಕ್ಕೆ ಹಾಹಾಕಾರ - ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮ
2 ಕೋಟಿ ರೂಪಾಯಿ ಖರ್ಚು ಮಾಡಿ ಯೋಜನೆ ರೂಪಿಸಿದರೂ ಕುಡಿಯುವ ನೀರು ಪೂರೈಕೆಯಾಗಿಲ್ಲ ಎನ್ನುವ ಆರೋಪ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ಕೇಳಿಬಂದಿದೆ.
ಬೇಸಿಗೆಯಲ್ಲಿ ತೊಂದರೆ ಆಗದಿರಲೆಂದು 2ಕೋಟಿ ರೂಪಾಯಿ ಖರ್ಚು ಮಾಡಿ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಲಾಗಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಮಹಿಳೆಯರು ಅಪೂರ್ಣಾ ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆ ಅಡಿಯಲ್ಲಿ ಬೋರ್ ವೆಲ್ ಕೊರೆದು 6 ಕಡೆ ನೀರು ಪೂರೈಸುವ ಯೋಜನೆ ಬಳಕೆಗೆ ಬಾರದೆ ವಿಫಲವಾಗಿದೆ.
ಯೋಜನೆ ಕಳಪೆತನ, ವೈಫಲತೆ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಈಗಲೆ ಒಂದು ಕೊಡ ನೀರಿಗಾಗಿ ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಅಧ್ಯಕ್ಷ ಕಿರಣ ದೂರಿದ್ದಾರೆ.