ರಾಯಚೂರು: ಜಿಲ್ಲೆಯಲ್ಲಿ ಮಳೆ ಕೊರತೆ, ಪ್ರವಾಹದಿಂದಾಗಿ ಆದ ಬೆಳೆ ನಷ್ಟ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ವಿಷೇಶ ಆದ್ಯತೆ ನೀಡಬೇಕು ಹಾಗೂ ಎನ್ಆರ್ಬಿಸಿ ಮೂಲಕ ಕೆರೆ ತುಂಬಿಸುವ ಕಾರ್ಯ ಕೈಗೊಳ್ಳಬೇಕೆಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಅಧಿಕಾರಿಗಳಿಗೆ ಸೂಚಿಸಿದರು.
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಏನು ಸಮಸ್ಯೆ ಎದುರಾಗಿದೆ, ಯಾವ ಭಾಗದಲ್ಲಿ ಏನೆಲ್ಲ ಬೆಳೆ ನಾಶ ಆಗಿದೆಯೋ ಅದರ ಪ್ರಮಾಣದ ಪಟ್ಟಿ ಸಿದ್ಧಪಡಿಸಿ ಎಂದು ಕೃಷಿ ಜಂಟಿ ನಿರ್ದೇಶಕರಿಗೆ ಸಲಹೆ ನೀಡಿದರು.