ರಾಯಚೂರು: ಜಿಲ್ಲೆಯ ಲಿಂಗಸುಗೂರು ಬಸ್ ನಿಲ್ದಾಣ ಒಳ ಆವರಣದಲ್ಲಿ ಮಂಗಳವಾರ ಬೆಳಗಿನ ಜಾವ ಕುಡಿದ ಅಮಲಿನಲ್ಲಿ ಬಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಕುಡಿದ ಅಮಲಿನಲ್ಲಿ ಬಿದ್ದು ವ್ಯಕ್ತಿ ಸಾವು
ಕುಡಿದ ಅಮಲಿನಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಬಸ್ ನಿಲ್ದಾಣದ ಒಳ ಆವರಣದಲ್ಲಿ ನಡೆದಿದೆ.
ಕುಡಿದ ಅಮಲಿನಲ್ಲಿ ಬಿದ್ದು ಸಾವು
ಮೃತ ವ್ಯಕ್ತಿಯನ್ನು ಮಾನ್ವಿ ತಾಲೂಕು ಪಾಮನಕಲ್ಲೂರು ಗ್ರಾಮದ ಬಂದೆನವಾಜ ಲಾಳೆಸಾಬ ಹಿರೇಮನಿ(45) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸಿಪಿಐ ಯಶವಂತ ಬಿಸನಳ್ಳಿ, ಪಿಎಸ್ಐ ಪ್ರಕಾಶರೆಡ್ಡಿ ಡಂಬಳ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.