ರಾಯಚೂರು: ಬಂಡವಾಳಶಾಹಿಗಳ ಮೂಲಕ ಅಧಿಕಾರಿಕ್ಕೆ ಬಂದ ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳ ಅನುಕೂಲಕ್ಕೆ ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ ವಿ ನಾಯಕ್ ಆರೋಪಿಸಿದ್ದಾರೆ.
ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳ ಮೂಲಕ ಅಧಿಕಾರಕ್ಕೆ ಬಂದಿದೆ. ದಲಿತರಿಗೆ, ಆದಿವಾಸಿಗಳಿಗೆ, ರೈತರಿಗೆ ಸೇರಿ ಬಡವರ ಹಿತ ಕಾಯುವ ಕೆಲಸ ಮಾಡದೆ, ಭೂಸುಧಾರಣೆ ಕಾಯ್ದೆ ಜಾರಿಗೊಳಿಸಿ ಬಂಡವಾಳ ಶಾಹಿಗಳ ಹಿತ ಕಾಪಾಡಲು ಮುಂದಾಗಿದೆ ಎಂದರು.
ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿವೆ. ರಾಜ್ಯದಲ್ಲಿ ಆರಂಭದಲ್ಲಿ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಜಾರಿ ಮಾಡಲಾಗಿತ್ತು. ಇದಾದ ಬಳಿಕ ಜಾರಿಗೊಳಿಸಿದ ನಿಯಮಗಳಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಕಟ್ಟುನಿಟ್ಟಿನ ನಿಯಮ ಜಾರಿಗೆ ತರಬೇಕಾಗಿತ್ತು.
ಆದರೆ, ಸರಿಯಾದ ನಿಯಮಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರ ಎಡವಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿದೆ. ಅಲ್ಲದೇ ಸರ್ಕಾರ ಆರೋಗ್ಯ ಇಲಾಖೆಗೆ ಅಗತ್ಯ ಉಪಕರಣಗಳನ್ನ ಪೂರೈಸಲು ಕ್ರಮ ಕೈಗೊಳ್ಳಬೇಕಾಗಿತ್ತು. ಆದರೆ, ನಿರ್ಲಕ್ಷ್ಯವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.