ಕರ್ನಾಟಕ

karnataka

ETV Bharat / state

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು ಪ್ರಕರಣ: ವಿವಿಧ ಸಂಘಟನೆಗಳಿಂದ ರಾಯಚೂರಲ್ಲಿ ಪ್ರತಿಭಟನೆ - undefined

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಇಂದು ವಿವಿಧ ಸಂಘಟನೆಗಳಿಂದ ಬೃಹತ್​ ಪ್ರತಿಭಟನೆ ನಡೆಸಲಾಯಿತು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ

By

Published : Apr 25, 2019, 1:45 PM IST

ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಬೃಹತ್ ಪ್ರತಿಭಟನೆ ನಡೆಸಿದವು.

ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ನಗರದ ಮಾಣಿಕ್ಯ ಪ್ರಭು ದೇವಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ವಿಶ್ವಕರ್ಮ ಸಮಾಜ ಮತ್ತು ನಾನಾ ಸಂಘಟನೆಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರ ಜೊತೆಗೆ ನಗರದ ಸರಾಫ್ ಬಜಾರ್​ನ ಕೆಲ ಅಂಗಡಿ ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದು, ಮುಂಜಾಗ್ರತ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು.

For All Latest Updates

TAGGED:

ABOUT THE AUTHOR

...view details