ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಮಾಣಿಕ್ಯ ದೇವಾಲಯದ ಹಿಂಭಾಗದಲ್ಲಿ ನಡೆದಿದೆ.
ಪರೀಕ್ಷೆಯಲ್ಲಿ ಪದೇ ಪದೇ ಫೇಲ್... ನೇಣಿಗೆ ಕೊರಳೊಡ್ಡಿದ ಎಂಜಿನಿಯರಿಂಗ್ ವಿದ್ಯಾರ್ಥಿನಿ! - ಎಂಜಿನಿಯರಿಂಗ್
ಎಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗಿದ್ದರಿಂದ ಮನನೊಂದು ಡೇತ್ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇತ್ತ ಕೆಲವರು ಇದು ಕೊಲೆ ಎಂದು ಶಂಕಿಸುತ್ತಿದ್ದಾರೆ.
ಆತ್ಮಹತ್ಯೆ
ಐಡಿಎಂಸಿ ಲೇಔಟ್ ನಿವಾಸಿ ಮಧು ಪತ್ತಾರ (23) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗಿದ್ದರಿಂದ ಮನನೊಂದು ಡೆತ್ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇತ್ತ ಕೆಲವರು ಇದು ಕೊಲೆ ಎಂದು ಶಂಕಿಸುತ್ತಿದ್ದಾರೆ.
ಕಳೆದ ಎರಡು-ಮೂರು ದಿನಗಳಿಂದ ಮನೆಗೆ ಬಂದಿರದ ವಿದ್ಯಾರ್ಥಿನಿ ಇಂದು ಶವವಾಗಿ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ನೇತಾಜಿ ಠಾಣೆಯ ಪೊಲೀಸರು ಭೇಟಿ ನೀಡಿ, ತನಿಖೆ ನಡೆಸುತ್ತಿದ್ದಾರೆ.