ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಇಂದು ಆರೋಪಿಯನ್ನು ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ : ಆರೋಪಿಯನ್ನ ಮತ್ತೆ 5 ದಿನ ಸಿಐಡಿ ವಶಕ್ಕೊಪ್ಪಿಸಿದ ಕೋರ್ಟ್ - undefined
ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಈವರೆಗೂ ಸಿಐಡಿ ಕಸ್ಟಡಿಯಲ್ಲಿದ್ದ. ಆದರೆ, ಇಂದು ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.
ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು ಪ್ರಕರಣ
ಆರೋಪಿ ಈವರೆಗೂ ಸಿಐಡಿ ಪೊಲೀಸರ ಕಸ್ಟಡಿಯಲ್ಲಿದ್ದ. ಆದರೆ, ಇಂದು ಸಿಐಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆರೋಪಿಯನ್ನು ಇನ್ನೂ ಐದು ದಿನ ತಮ್ಮ ವಶಕ್ಕೆ ನೀಡಬೇಕೆಂದು 3ನೇ ಜೆಎಂಎಫ್ಸಿ ನ್ಯಾಯಾಧೀಶರಿಗೆ ಸಿಐಡಿ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಸದರಿ ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಇನ್ನೂ ಐದು ದಿನ ಸಿಐಡಿ ಕಸ್ಟಡಿಗೆ ವಹಿಸಿ ಆದೇಶಿಸಿದ್ದಾರೆ. ಮೇ 2ರವರೆಗೂ ಆರೋಪಿ ಸಿಐಡಿ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾನೆ.
Last Updated : Apr 27, 2019, 6:17 PM IST