ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿ ಸುದರ್ಶನ ಯಾದವ್ ನ್ಯಾಯಾಂಗ ಬಂಧನವನ್ನು ಜೂ. 7ರವರೆಗೆ ಮುಂದೂಡಿ 3ನೇ ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ: ಆರೋಪಿಯ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ - undefined
ರಾಯಚೂರು ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿಯ ನ್ಯಾಯಾಂಗ ಬಂಧನ ಅವಧಿಯು ಮತ್ತೊಮ್ಮೆ ವಿಸ್ತರಣೆಯಾಗಿದೆ.
ಆರೋಪಿ
ಸೋಮವಾರ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡ ಕಾರಣ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇದಕ್ಕೂ ಮುನ್ನ ಸಿಐಡಿಯು ತನ್ನ ವಿಚಾರಣೆ ಪೂರ್ಣಗೊಂಡ ಕಾರಣ ಮೇ 2ರಂದು ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಿತ್ತು. ಅದಾದ ನಂತರ ಎರಡನೇ ಬಾರಿಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ. ರಾಯಚೂರಿನ 3ನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ಅವಿನಾಶ ಗಾಳಿಯವರು ಆದೇಶ ಹೊರಡಿಸಿದ್ದಾರೆ.