ರಾಯಚೂರು:ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಹಾಗೂ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು ಪ್ರಕರಣ... ಪೊಲೀಸ್ ಪೇದೆ, ಪಿಎಸ್‌ಐ ಅಮಾನತು! - undefined
ರಾಯಚೂರಿನ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪಿಎಸ್‌ಐ ಹಾಗೂ ಓರ್ವ ಪೊಲೀಸ್ ಪೇದೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಸದರ್ ಬಜಾರ್ ಪೊಲೀಸ್ ಠಾಣೆ
ಸದರ್ ಬಜಾರ್ ಪೊಲೀಸ್ ಠಾಣೆ ರೈಟರ್ ಆಂಜನೇಯ ಮತ್ತು ನಗರ ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಬಿ.ಬಿ.ಮರಿಯಮ್ಮರನ್ನು ಅಮಾನತುಗೊಳಿಸಿ ಎಸ್ಪಿ ಡಾ. ಕಿಶೋರ್ ಬಾಬು ಆದೇಶ ಹೊರಡಿಸಿದ್ದಾರೆ.
ಮೃತ ವಿದ್ಯಾರ್ಥಿನಿಯ ಮೊಬೈಲ್ ಮತ್ತು ಬೈಕ್ ಕೀಯನ್ನ ಆಂಜನೇಯ, ವಿದ್ಯಾರ್ಥಿನಿ ಮನೆಗೆ ತೆರಳಿ ವಾಪಸ್ ನೀಡಿದ್ದ. ಇದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಸದ್ಯ ಪ್ರಕರಣ ಸಂಬಂಧ ಸಿಐಡಿ ತನಿಖೆ ಚುರುಕುಗೊಳಿಸಿದೆ.