ರಾಯಚೂರು: ಅನುಮಾನಾಸ್ಪದವಾಗಿ ಹತ್ಯೆಗೀಡಾದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮನೆಗೆ ಶಾಸಕ ಡಾ.ಶಿವರಾಜ್ ಪಾಟೀಲ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣ- ಪೋಷಕರಿಗೆ ಶಾಸಕರಿಂದ ಸಾಂತ್ವನ - kannada news
ನಿಗೂಢ ಹತ್ಯೆ ಪ್ರಕರಣ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಶಿವರಾಜ್ ಪಾಟೀಲ್ ಮತ್ತು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ.
ನಿಗೂಢ ಹತ್ಯೆ ಪ್ರಕರಣ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಶಿವರಾಜ್ ಪಾಟೀಲ್ ಮತ್ತು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ.
ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಾಸಕ ಡಾ.ಶಿವರಾಜ್ ಪಾಟೀಲ್, ವಿಷಾದ ವ್ಯಕ್ತಪಡಿಸಿದರಲ್ಲದೇ ಪೋಷಕರಿಗೆ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಸ್ತೃತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಏ.13 ರಂದು ಎಸ್ಪಿಯವರನ್ನ ಭೇಟಿಮಾಡಿ ಪ್ರಕರಣ ಸಿಐಡಿಗೆ ವಹಿಸುವಂತೆ ಒತ್ತಾಯಿಸಿದ್ದೆ ಎಂದರು. ಈ ವೇಳೆ ರಾಯಚೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಶಾಸಕರಿಗೆ ಸಾಥ್ ನೀಡಿದ್ರು.