ರಾಯಚೂರು:ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡು ಹೋಗಿರುವ ಮೂವರು ವ್ಯಕ್ತಿಗಳ ವಿರುದ್ಧ ಇಲ್ಲಿನ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಸ್ಕಿ: ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡು ಮೂವರು ಪರಾರಿ! - Complaint filed
ಕ್ವಾರಂಟೈನ್ಗೆ ಒಳಗಾಗಿದ್ದ ಮೂವರು ಕಣ್ಮರೆಯಾಗಿದ್ದು, ಈ ಬಗ್ಗೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![ಮಸ್ಕಿ: ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡು ಮೂವರು ಪರಾರಿ! Escape from quarantine: Complaint filed against three persons](https://etvbharatimages.akamaized.net/etvbharat/prod-images/768-512-7459460-175-7459460-1591182235575.jpg)
ಮಸ್ಕಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರದಿಂದ ಅಧಿಕಾರಿಗಳ ಕಣ್ಣು ತಪ್ಪಿಸಿ ಮೂವರು ಪರಾರಿಯಾಗಿದ್ದಾರೆ. ಹೀಗಾಗಿ ಮೂವರು ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
ಕ್ವಾರಂಟೈನ್, ಹೋಂ ಕ್ವಾರಂಟೈನ್ ಕೇಂದ್ರದಿಂದ ತಪ್ಪಿಸಿಕೊಂಡು ಹೋಗುತ್ತಿರುವ ಬಗ್ಗೆ ಜಿಯೋ ಫೆನ್ಸಿಂಗ್ ಹಾಗೂ ಇ-ಮೇಲ್ ಮೂಲಕ ಮಾಹಿತಿ ಬರುತ್ತಿದೆ. ಅದೇ ರೀತಿ ಈ ಮೂವರು ವ್ಯಕ್ತಿಗಳು ತಪ್ಪಿಸಿಕೊಂಡಿರುವ ಬಗ್ಗೆ ಇ-ಮೇಲ್ ಬಂದಿದ್ದು, ಅವರ ವಿರುದ್ಧ ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಪತ್ತೆ ಕಾರ್ಯ ನಡೆದಿದ್ದು, ಪತ್ತೆ ಬಳಿಕ ಪುನಃ ಕ್ವಾರಂಟೈನ್ ಮಾಡಿ ಬಳಿಕ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.