ರಾಯಚೂರು:ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾನ್ವಿ ತಾಲೂಕಿನ ಅಮರಾವತಿ ಗ್ರಾಮದಲ್ಲಿ ನಡೆದಿದೆ.
ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ
ಅನ್ನದಾತರ ಆತ್ಮಹತ್ಯೆ ಪ್ರಕರಣಗಳಿಗೆ ಕೊನೆಯೇ ಇಲ್ಲದಂತಾಗಿದೆ. ಮಾನ್ವಿ ತಾಲೂಕಿನ ಅಮರಾವತಿ ಗ್ರಾಮದಲ್ಲಿ ರೈತನೋರ್ವ ಸಾಲಾಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
Farmer committed suicide
ಹನುಮಂತ (44) ಆತ್ಮಹತ್ಯೆಗೆ ಶರಣಾಗಿರುವ ರೈತ. ಇವರು ಜಾನೇಕಲ್ ಗ್ರಾಮದ ಬ್ಯಾಂಕ್ನಲ್ಲಿ ಸುಮಾರು 30 ಸಾವಿರ ಹಾಗೂ ಪೋತ್ನಾಳ ಗ್ರಾಮದ ಬ್ಯಾಂಕ್ನಲ್ಲಿ ಲಕ್ಷಕ್ಕೂ ಅಧಿಕ ಸಾಲ ಪಡೆದಿದ್ದರು ಎನ್ನಲಾಗ್ತಿದೆ. ಪಡೆದ ಸಾಲವನ್ನು ಹಿಂದಿರುಗಿಸಲಾಗದೇ ರೈತ ಹನುಮಂತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.