ರಾಯಚೂರು: ಸಾಲಬಾಧೆ ತಾಳಲಾರದೆ ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಾಲಭಾವಿ ತಾಂಡಾದಲ್ಲಿ ನಡೆದಿದೆ.
ರಾಯಚೂರು : ಸಾಲಬಾಧೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು - Raichur crime latest news
ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಾಲಭಾವಿ ತಾಂಡಾದಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೈತ
ರಾಮಣ್ಣ ಪವಾರ (32) ಆತ್ಮಹತ್ಯೆ ಮಾಡಿಕೊಂಡ ರೈತ. ಆ.21 ರಂದು ಜಮೀನಿನಲ್ಲಿ ಕೆಲಸಕ್ಕೆಂದು ಹೊಗಿದ್ದ ರಾಮಣ್ಣ, ವಿಷ ಸೇವನೆ ಮಾಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರೈತ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.