ರಾಯಚೂರು:ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ತಾಲೂಕಿನ ಹುಣಶಿಹಾಳಹುಡಾ ಗ್ರಾಮದಲ್ಲಿ ನಡೆದಿದೆ.
ರೈತ ಚಂದ್ರಶೇಖರ ಓಂಕಾರಿ(55) ಮೃತ ದುರ್ದೈವಿ. ಮುಂಗಾರು ಹಿನ್ನೆಲೆ ರೈತ ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.