ರಾಯಚೂರು: ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಹಾವು ಕಚ್ಚಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ರಾಯಚೂರಿನಲ್ಲಿ ಹಾವು ಕಚ್ಚಿ ರೈತ ಮಹಿಳೆ ಸಾವು - ಹಾವು ಕಚ್ಚಿ ರೈತ ಮಹಿಳೆ ಸಾವು ಸುದ್ದಿ
ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಹಾವು ಕಚ್ಚಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮಾಲಂಬಿ ಮೃತ ಮಹಿಳೆ.
ಮಾಲಂಬಿ ಮೃತ ಮಹಿಳೆ. ಈಕೆ ಜಮೀನಿನಲ್ಲಿ ಬೆಳೆದ ಹತ್ತಿ ಫಸಲನ್ನು ಬಿಡಿಸುವುದಕ್ಕಾಗಿ ಹೊಲಕ್ಕೆ ತೆರಳಿದ್ದಳು ಎನ್ನಲಾಗಿದೆ. ಮಧ್ಯಾಹ್ನದ ವೇಳೆ ಮಾಲಿಂಬಿಯನ್ನ ಮನೆಗೆ ಕರೆದುಕೊಂಡು ಬರಲು ಮಗ ಹೊಲಕ್ಕೆ ತೆರಳಿದ್ದಾನೆ. ಆ ವೇಳೆ ಹೊಲದಲ್ಲಿ ಮಾಲಂಬಿ ಎಚ್ಚರವಿಲ್ಲದೆ ಬಿದ್ದಿದ್ದಳು. ಕೂಡಲೇ ಸಂಬಂಧಿಕರ ನೆರವಿನಿಂದ ಈಕೆಯನ್ನು ಕವಿತಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.