ರಾಯಚೂರು: ನವೆಂಬರ್ 7ಕ್ಕೆ ಸಿ ಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಿಂದ ಸಾವಿರಾರು ರೈತರು ತೆರಳುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಬಣದ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ತಿಳಿಸಿದ್ದಾರೆ.
ಸಿಗದ ನೆರೆ ಪರಿಹಾರ, ನ. 7ರಂದು ಸಿಎಂ ನಿವಾಸಕ್ಕೆ ರೈತರ ಮುತ್ತಿಗೆ!
ನೆರೆಹಾವಳಿಯಿಂದ ರಾಯಚೂರಿನ ಜನತೆ ಸಂಕಷ್ಟಕ್ಕೊಳಗಾಗಿದ್ದು, ಹಲವಾರು ರೈತರು ಬೆಳೆ ನಷ್ಟದಿಂದ ಕಂಗೆಟ್ಟಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.
ಜಿಲ್ಲೆಯಲ್ಲಿ ಇತ್ತೀಚಿಗೆ ಉಂಟಾದ ನೆರೆಹಾವಳಿಯಿಂದ ಸಂತ್ರಸ್ಥರು ಸಂಕಷ್ಟಕ್ಕೆ ಈಡಾಗಿದ್ದು, ಹಲವಾರು ರೈತರು ಬೆಳೆ ನಷ್ಟದಿಂದ ಕಂಗೆಟ್ಟಿದ್ದಾರೆ. ರಾಜ್ಯ ಸರ್ಕಾರ ಪರಿಹಾರ ನೀಡದೆ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಸಿ ಎಂ ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಲಾಗಿದೆ ಎಂದರು.
ಇತ್ತೀಚಿಗೆ ಉಂಟಾದ ನೆರೆ ಹಾವಳಿಯಿಂದ ಎರಡೂವರೆ ಲಕ್ಷ ಮನೆಗಳು ಮುಳುಗಿವೆ. 43 ಹಳ್ಳಿಗಳು ಜಲಾವೃತವಾಗಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರೈತರಿಗೆ ನಷ್ಟ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಶರಣಪ್ಪ ದೂರಿದರು.