ರಾಯಚೂರು: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ - raichur crime news
ರಾಯಚೂರು ಜಿಲ್ಲೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಾಮನಕಲ್ಲೂರು ಕ್ರಾಸ್ ಬಳಿ ನಿನ್ನೆ ತಡರಾತ್ರಿ ಈ ಪ್ರಕರಣ ನಡೆದಿದೆ. ತಿರುಪತಿ ಎಂಬಾತನಿಗೆ 6 ಜನರು ಸೇರಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ವ್ಯಕ್ತಿ ತಮಾಷೆಗಾಗಿ ಸಿದ್ದರಾಮ ಎನ್ನುವ ವ್ಯಕ್ತಿ ತಲೆ ಮೇಲೆ ಕೈಇಟ್ಟಿದ್ದ. ಇದರಿಂದ ಸಿದ್ದರಾಮ ಹಾಗೂ ತಿರುಪತಿ ಪರಸ್ಪರ ಅವಾಚ್ಯ ಪದಗಳಿಂದ ನಿಂದಿಸಿಕೊಂಡಿದ್ದರು. ನಂತರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದಾಗ ಅಲ್ಲಿಂದ ಸ್ಥಳೀಯರು ಸಮಾಧಾನಪಡಿಸಿ ಕಳುಹಿಸಿದ್ದರು. ಆದರೆ ತಡರಾತ್ರಿ ಸಿದ್ದರಾಮ, ನಾಗಪ್ಪ, ಯಮನೂರು, ರಂಗನಾಥ, ಯಲ್ಲಪ್ಪ, ಹನುಮಂತ ಒಟ್ಟು 6 ಜನ ಸೇರಿಕೊಂಡು ತಿರುಪತಿ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.