ರಾಯಚೂರು:ಶಾರ್ಟ್ ಸರ್ಕ್ಯೂಟ್ನಿಂದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ತಾಲೂಕಿನ ಶಕ್ತಿನಗರದ ಎರಡನೇ ಕ್ರಾಸ್ ಬಳಿ ಬಟ್ಟೆ ಅಂಗಡಿಯೊಂದರಲ್ಲಿ ನಿನ್ನೆ ತಡರಾತ್ರಿ ಘಟನೆ ಜರುಗಿದೆ. ಸಿದ್ದು ಸ್ವಾಮಿ ಎಂಬವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಬೆಂಕಿ ತಗುಲಿದೆ. ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ.