ರಾಯಚೂರು:ಇಲ್ಲಿನ ರಿಮ್ಸ್ ವೈದ್ಯಕೀಯ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳು ಸೇರಿದಂತೆ ಐವರು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ನಡೆಸಿದ ತಪಾಸಣೆ ವೇಳೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ರಾಯಚೂರು: ರಿಮ್ಸ್ನಲ್ಲಿ ಕೇರಳ ಮೂಲದ ವಿದ್ಯಾರ್ಥಿಗಳು ಸೇರಿ ಐವರಿಗೆ ಕೋವಿಡ್ - ರಿಮ್ಸ್ ಕೋವಿಡ್ ಸೋಂಕು
ರಿಮ್ಸ್ ವೈದ್ಯಕೀಯ ಕಾಲೇಜಿನ ಕೇರಳ ಮೂಲದ ವಿದ್ಯಾರ್ಥಿಗಳು ಸೇರಿದಂತೆ ಐವರು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ತಗುಲಿದೆ.
ರಿಮ್ಸ್ನ ಕೇರಳ ಮೂಲದ ವಿದ್ಯಾರ್ಥಿಗಳು ಸೇರಿ ಐವರಿಗೆ ಕೋವಿಡ್ ದೃಢ
ವೈದ್ಯಕೀಯ ಕಾಲೇಜು ಆರಂಭಗೊಂಡ ಹಿನ್ನೆಲೆಯಲ್ಲಿ ಕಾಲೇಜಿಗೆ ಬಂದ ಎಲ್ಲಾ 650 ವಿದ್ಯಾರ್ಥಿಗಳ ಗಂಟಲಿನ ದ್ರವ ತಪಾಸಣೆಗೆ ಕಳಿಸಲಾಗಿತ್ತು. ಆಗ ಎಲ್ಲರ ವರದಿ ನೆಗೆಟಿವ್ ಆಗಿತ್ತು. ಮತ್ತೊಮ್ಮೆ ಎರಡು ದಿನಗಳ ಹಿಂದೆ ನಡೆಸಿದ ತಪಾಸಣೆ ವೇಳೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಸಂಪರ್ಕ ಹೊಂದಿರುವವರ ಪರೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೋಡಿದ್ದಾರೆ.