ರಾಯಚೂರು: ಕೃಷ್ಣಾ ನದಿಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಾಯಚೂರು ಜಿಲ್ಲೆಯ ಪ್ರವಾಹ ಭೀತಿ ಮುಂದುವರೆದಿದೆ.
ರಾಯಚೂರು ಜಿಲ್ಲೆಯಲ್ಲಿ ಮುಂದುವರಿದ ಪ್ರವಾಹದ ಭೀತಿ
ಕೃಷ್ಣಾ ನದಿಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಾಯಚೂರು ಜಿಲ್ಲೆಯ ದೇವದುರ್ಗ, ಲಿಂಗಸುಗೂರು, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದೆ.
ಜಿಲ್ಲೆಯ ದೇವದುರ್ಗ, ಲಿಂಗಸೂಗೂರು, ರಾಯಚೂರು ತಾಲೂಕಿನ ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹ ಭೀತಿ ಉಂಟಾಗಿದೆ. ನಾರಾಯಣಪುರ ಜಲಾಶಯಕ್ಕೆ 2.80 ಲಕ್ಷ ಕ್ಯೂಸೆಕ್ ಒಳಹರಿವು ಹರಿದು ಬರುತ್ತಿದೆ. ಜಲಾಶಯದ 27 ಗೇಟ್‌ಗಳಿಂದ 2.81 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡಲಾಗಿದೆ. ಇದರಿಂದಾಗಿ ಜಿಲ್ಲೆಯ ಶೀಲಹಳ್ಳಿ, ಹೂವಿನಹೆಡಗಿ ಸೇತುವೆಗಳು ಮುಳಗಡೆಯಾಗಿದ್ದು, ಗುರ್ಜಾಪುರ ಗ್ರಾಮದ ಬ್ರಿಡ್ಜ್ ಕಂ ಬ್ಯಾರೇಜ್ ಮುಳಗಡೆ ಹಂತಕ್ಕೆ ತಲುಪಿದೆ.
ಈಗಾಗಲೇ ನದಿ ಪಾತ್ರದ ಗ್ರಾಮಗಳು ಹಾಗೂ ನಡುಗಡ್ಡೆ ಪ್ರದೇಶದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜಲಾಶಯದ ವ್ಯಾಪ್ತಿಗೆ ಬರುವ ನಾಲೆಗಳಿಗೆ 6,500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.