ರಾಯಚೂರು:ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಕೃಷ್ಣಾ ನದಿಯು ಮೈದುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಪ್ರವಾಹದಿಂದ ಉಂಟಾಗಿದ್ದು, ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ತಕ್ಷಣ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಜ್ಜಾಗಿದ್ದಾರೆ. ಇದಕ್ಕಾಗಿ ಹಿರಿಯ ಮತ್ತು ಕಿರಿಯ ಅಧಿಕಾರಿಗಳ ಒಳಗೊಂಡ ತಂಡಗಳನ್ನು ರಚಿಸಲಾಗಿದೆ.
ಸತತ ಮಳೆಯಿಂದ ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಿಂದಾಗಿ ಕೃಷ್ಣ ನದಿಯಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು, ಜಿಲ್ಲೆಯ ಹಲವೆಡೆ ಸಂಚಾರ ವ್ಯವಸ್ಥೆ ಹದಗೆಟ್ಟಿದೆ. ಅಲ್ಲದೆ ಕುರ್ವಕುಲಾ, ಕುರ್ತಕುಂದಾ, ಕುರ್ವಕುರ್ದಾ ಗ್ರಾಮಗಳು ನಡುಗಡ್ಡೆಗಳಾಗಿದ್ದು, ಗ್ರಾಮಸ್ಥರು ತೆಪ್ಪೆದ ಮೊರೆ ಹೋಗಿದ್ದಾರೆ. ತಾಲೂಕಿನ ಕಾಡ್ಲೂರು, ಗುರ್ಜಾಪುರ, ಮಾಮದದೊಡ್ಡಿ, ಗುಂಜಳ್ಳಿ ಸೇರಿದಂತೆ ಹಲವು ಗ್ರಾಮಗಳ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು ಜೀನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ತಾಲೂಕು ಆರೋಗ್ಯ ಅಧಿಕಾರಿ ಡಾ. ಶಾಕೀರ್ ಅವರ ನೇತೃತ್ವದ ತಂಡ ಪ್ರವಾಹ ಪೀಡಿತ ಗ್ರಾಮಗಳ ಜನರಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲು ಅಧಿಕಾರಿಗಳ ತಂಡ ರಚಿಸಲಾಗಿದೆ. ಸಾರ್ವಜನಿಕರು ಆರೋಗ್ಯ ಸಂಬಂಧಿತ ತುರ್ತು ಪರಿಸ್ಥಿತಿಯ ವೇಳೆ ಅಧಿಕಾರಿಗಳಿಗೆ ಕರೆ ಮಾಡಿದರೆ ತಕ್ಷಣವೇ ಚಿಕಿತ್ಸೆ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಯಚೂರು ತಾಲೂಕಿನ ಗ್ರಾಮಸ್ಥರು ಅಗತ್ಯ ಚಿಕಿತ್ಸೆಗೆ ತಾಲೂಕು ಆರೋಗ್ಯ ಅಧಿಕಾರಿಗಳ ಮೊಬೈಲ್ ಸಂಖ್ಯೆ 94808 40772 ಹಾಗೂ 94808 40557ಗೆ ಕರೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.