ರಾಯಚೂರು: ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸುತ್ತಿರುವ ವೇಳೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಈ ಘಟನೆ ಜರುಗಿದೆ. ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಎ. ಪಾಪಾರೆಡ್ಡಿ, ಪಶ್ಚಿಮ ಠಾಣೆ ಪೊಲೀಸ್ ಕಾನ್ಸ್ಟೇಬಲ್ಗೆ ಕಪಾಳ ಮೋಕ್ಷ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ.
ದಲಿತರ ಕುರಿತು ಅವಳನೇಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ, ಅವರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದ್ರೆ, ಪೊಲೀಸರು ಪ್ರತಿಕೃತಿ ದಹಿಸಲು ಅವಕಾಶ ನೀಡಲಿಲ್ಲ.