ರಾಯಚೂರು: ಜಿಲ್ಲೆಯ ಮಾನವಿ ಪಟ್ಟಣದ ವಿವಿಧ ವಾಣಿಜ್ಯ ಉದ್ದಿಮೆ ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಮಾನವಿಯಲ್ಲಿ ನಾಲ್ವರು ಬಾಲ ಕಾರ್ಮಿಕರ ರಕ್ಷಣೆ.. ಅಂಗಡಿ ಮಾಲೀಕರ ವಿರುದ್ಧ ಕೇಸ್ - ಬಾಲಕಾರ್ಮಿಕ ಯೋಜನಾಧಿಕಾರಿ
ಮಾನವಿಯ ಗ್ಯಾರೇಜ್, ಹೋಟೆಲ್, ಹಾರ್ಡ್‌ವೇರ್ ಶಾಪ್ ಹಾಗೂ ಬಟ್ಟೆ ಅಂಗಡಿಗಳಲ್ಲಿ ನಾಲ್ವರು ಮಕ್ಕಳು ಕೆಲಸ ಮಾಡುತ್ತಿದ್ದರು. ಇವರನ್ನು ರಕ್ಷಿಸಿ ಬಿಡುಗಡೆಗೊಳಿಸಲಾಗಿದೆ. ಬಳಿಕ ಮಕ್ಕಳನ್ನು ಪಾಲಕರಿಗೆ ಹಸ್ತಾಂತರಿಸಲಾಗಿದೆ ಎಂದು, ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದರು.
ಬಾಲ ಕಾರ್ಮಿಕರ ರಕ್ಷಣೆ
ಇಲ್ಲಿನ ಗ್ಯಾರೇಜ್, ಹೋಟೆಲ್, ಹಾರ್ಡ್‌ವೇರ್ ಶಾಪ್ ಹಾಗೂ ಬಟ್ಟೆ ಅಂಗಡಿಗಳಲ್ಲಿ ನಾಲ್ವರು ಮಕ್ಕಳು ಕೆಲಸ ಮಾಡುತ್ತಿದ್ದರು. ಇವರನ್ನು ರಕ್ಷಿಸಿ ಬಿಡುಗಡೆಗೊಳಿಸಲಾಗಿದೆ. ಬಳಿಕ ಮಕ್ಕಳನ್ನು ಪಾಲಕರಿಗೆ ಹಸ್ತಾಂತರಿಸಲಾಯಿತು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ತಿಳಿಸಿದರು.
ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ನಾಲ್ವರು ಅಂಗಡಿ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆಯಡಿ ಮಾನವಿ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಿಸಲಾಗಿದೆ.