ಕರ್ನಾಟಕ

karnataka

ETV Bharat / state

ಕಲ್ಲಿದ್ದಲು ಕೊರತೆ: ರಾಯಚೂರು ವಿದ್ಯುತ್ ಘಟಕಗಳಲ್ಲಿ ಉತ್ಪಾದನೆ ಸ್ಥಗಿತ - Power generation breakdown

ಕಲ್ಲಿದ್ದಲಿನ ಕೊರತೆಯಿಂದ ರಾಯಚೂರು ಬೃಹತ್ ಶಾಖೋತ್ಪನಾ ಘಟಕದ ನಾಲ್ಕು ವಿದ್ಯುತ್ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. 1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಇರುವ ಕೇಂದ್ರದಲ್ಲಿ ಸದ್ಯ ನಾಲ್ಕು ಘಟಕಗಳಿಂದ 578 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ.

Raichur Massive Power generation Unit
ರಾಯಚೂರು ಬೃಹತ್ ಶಾಖೋತ್ಪನಾ ಘಟಕ

By

Published : Mar 24, 2022, 1:31 PM IST

ರಾಯಚೂರು:ರಾಯಚೂರು ಬೃಹತ್ ಶಾಖೋತ್ಪನಾ ಘಟಕದ ನಾಲ್ಕು ವಿದ್ಯುತ್ ಘಟಕಗಳು ಸ್ಥಗಿತಗೊಂಡಿದ್ದು, ತಾಲೂಕಿನ ಶಕ್ತಿನಗರದಲ್ಲಿರುವ ವಿದ್ಯುತ್ ಉತ್ಪಾದನಾ ಸ್ಥಾವರ 8 ಘಟಕಗಳ ಪೈಕಿ, ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ.

1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯವಿರುವ ಕೇಂದ್ರದಲ್ಲಿ ಸದ್ಯ ನಾಲ್ಕು ಘಟಕಗಳಿಂದ 578 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 1,3,6,8 ಘಟಕಗಳು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದರೆ, 2,4,5,7ನೇ ಘಟಕಗಳು ಬಂದ್ ಆಗಿವೆ. ಕಲ್ಲಿದ್ದಲಿನ ಕೊರತೆಯಿಂದ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಆರ್​ಟಿಪಿಎಸ್ ಎಕ್ಸಿಕ್ಯೂಟ್ ಡೈರೆಕ್ಟರ್(ಇಡಿ)ಅನ್ನು ದೂರವಾಣಿ ಮೂಲಕ ಸಂಪರ್ಕಿಸಿದರೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.

ಆರ್​ಟಿಪಿಎಸ್​ನಿಂದ ರಾಜ್ಯದ ವಿದ್ಯುತ್ ಜಲಕ್ಕೆ ಅಪಾರ ಪ್ರಮಾಣದಲ್ಲಿ ವಿದ್ಯುತ್ ರವಾನಿಸಲಾಗುತ್ತದೆ. ಆದರೆ, ಬೇಸಿಗೆ ಸಮಯದಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿರುವುದರಿಂದ ವಿದ್ಯುತ್ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ABOUT THE AUTHOR

...view details