ರಾಯಚೂರು:ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಅವ್ಯವಸ್ಥೆಯ ಆಗರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಶಾಂತಕುಮಾರ ಹೊನ್ನುಟಗಿ ಆಗ್ರಹಿಸಿದ್ದಾರೆ.
ಅವ್ಯವಸ್ಥೆ ಆಗರವಾದ ಗಬ್ಬೂರು ಆರೋಗ್ಯ ಕೇಂದ್ರ: ಸೂಕ್ತ ಕ್ರಮಕ್ಕೆ ಆಗ್ರಹ - ರಾಯಚೂರು ಲೇಟೆಸ್ಟ್ ನ್ಯೂಸ್
ದೇವದುರ್ಗ ತಾಲೂಕಿನ ಹೋಬಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಸುತ್ತಮುತ್ತಲಿನ 40 ಹಳ್ಳಿಗಳಿಗೆ ಆಸರೆಯಾಗಿದೆ. ಆದರೆ, ಈ ಆಸ್ಪತ್ರೆ ಅವ್ಯವಸ್ಥೆ ಆಗರವಾಗಿದ್ದು, ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ದೊರೆಯದೇ ಪರದಾಡುವಂತಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಶಾಂತಕುಮಾರ ಹೊನ್ನುಟಗಿ ಆರೋಪಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೇವದುರ್ಗ ತಾಲೂಕಿನ ಹೋಬಳಿಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವು ಸುತ್ತಮುತ್ತಲಿನ 40 ಹಳ್ಳಿಗಳಿಗೆ ಒಂದಾಗಿದೆ. ಆದರೆ, ಈ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ರೋಗಿಗಳಿಗೆ ಸೂಕ್ತ ಆರೋಗ್ಯ ಸೇವೆ ದೊರೆಯದೇ ಪರದಾಡುವಂತಾಗಿದೆ. ಆಸ್ಪತ್ರೆಗೆ ಬರುವ ಗರ್ಭಿಣಿ ಮಹಿಳೆಯರು ಹಾಗೂ ಹಸುಗೂಸುಗಳಿಗೆ ಸಿಗಬೇಕಾದ ಆರೋಗ್ಯ ಸೇವೆ ಸಿಗುತ್ತಿಲ್ಲ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡದೇ ಖಾಸಗಿ ಆಸ್ಪತ್ರೆಗೆ ಕಳಿಸಿಕೊಡುತ್ತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.